ಕರಾವಳಿ ಪ್ರಭ ನ್ಯೂಸ್
ಭಟ್ಕಳ: ಪಟ್ಟಣದ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಆರಂಭೋತ್ಸವದ ಹಿನ್ನೆಲೆಯಲ್ಲಿ ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮಕ್ಕಳನ್ನು ಬರಮಾಡಿಕೊಂಡರು. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಂದ ಜ್ಯೋತಿ ಬೆಳಗಿಸಲಾಯಿತು. ಮುಖ್ಯಶಿಕ್ಷಕಿ ರೂಪಾ ಖಾರ್ವಿ ಅವರು ಮಕ್ಕಳಿಗೆ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಜೀವನ ಮೌಲ್ಯವನ್ನು ಕಥೆಯ ಮೂಲಕ ತಿಳಿಸಿದರು. ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ನಾಯಕ ಉಪಸ್ಥಿತರಿದ್ದರು. ಶಿಕ್ಷಕಿಯರು ಹಾಡು ನೃತ್ಯದ ಮೂಲಕ ಮಕ್ಕಳಿಗೆ ಮನರಂಜನೆ ನೀಡಿದರು. ಮಕ್ಕಳಿಗೆ ವಿವಿಧ ಚಟುವಟಿಕೆ ಮಾಡಿಸಿ ಕಲಿಕೆಗೆ ಪ್ರೇರಣೆ ನೀಡಲಾಯಿತು. ಶಾಲಾ ಆರಂಭೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು.